ದತ್ತು ಸ್ವೀಕಾರದ ಬಗ್ಗೆ ನಿಮಗೆಷ್ಟು ಗೊತ್ತು

ನವೆಂಬರ್ ತಿಂಗಳನ್ನು ದತ್ತು ಸ್ವೀಕಾರ ಜಾಗೃತಿ ಮಾಸಾಚರಣೆಯಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ನಂದಿಬೆಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಅನಾಥ, ಪರಿತ್ಯಕ್ತ ಹಾಗೂ ಪೋಷಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಕಾನೂನುಬದ್ಧ ದತ್ತು ಪ್ರಕ್ರಿಯೆಯ ಮೂಲಕ ಸುರಕ್ಷಿತ ಕುಟುಂಬ ಮತ್ತು ಉತ್ತಮ ಭವಿಷ್ಯ ಕಲ್ಪಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ದತ್ತು ಪಡೆಯಲು ಇಚ್ಛಿಸುವವರು ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದ (CARA) ಅಧಿಕೃತ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅನಧಿಕೃತ ದತ್ತು ಮತ್ತು ಮಕ್ಕಳ ಮಾರಾಟದಂತಹ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು. ಸಂಕಷ್ಟದಲ್ಲಿರುವ ಅಥವಾ ರಕ್ಷಣೆಯ ಅಗತ್ಯವಿರುವ ಮಕ್ಕಳು ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098 ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-13 17:35:00
No Reviews