ಕಾವ್ಯಾ ಮಾರನ್‌ ಕೈಹಿಡಿದ ರಾಕ್‌ಸ್ಟಾರ್ ಅನಿರುದ್ಧ್

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್ ನೆಟ್‌ವರ್ಕ್ ನಿರ್ದೇಶಕಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗ್ರೀಸ್‌ನ ಸುಂದರ ತಾಣದಲ್ಲಿ ಅದ್ಧೂರಿಯಾಗಿ ನಡೆದ ಡೆಸ್ಟಿನೇಷನ್ ವೆಡ್ಡಿಂಗ್‌ನಲ್ಲಿ ಈ ಜೋಡಿ ಸಪ್ತಪದಿ ತುಳಿದಿದ್ದು, ತಮ್ಮ ಮದುವೆಯ ಸುಂದರ ಕ್ಷಣಗಳ ಫೋಟೋಗಳನ್ನು ಅನಿರುದ್ಧ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಜೀವನದ ಅತ್ಯಂತ ನೆಚ್ಚಿನ ಕ್ಷಣ, ಜೀವನಪರ್ಯಂತಕ್ಕಾಗಿ 11.11” ಎಂಬ ಭಾವನಾತ್ಮಕ ಸಾಲುಗಳ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳು ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿವೆ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-12 13:38:33
No Reviews