ಆರ್‌ಸಿಬಿ ವನಿತೆಯರ ಟಾಸ್‌ ಜಯ; ಬೌಲಿಂಗ್‌ ಆಯ್ಕೆ

ಇಲ್ಲಿನ ಬಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL 2026) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡಗಳು ಪ್ರಶಸ್ತಿಗಾಗಿ ರೋಚಕ ಸಮರ ನಡೆಸುತ್ತಿವೆ. ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲು ಬ್ಯಾಟಿಂಗ್‌ಗೆ ಇಳಿಯಲಿದೆ.

ಉಭಯ ತಂಡಗಳ ಪ್ಲೇಯಿಂಗ್‌ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCBW):
ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನಾ (ನಾಯಕಿ), ಜಾರ್ಜಿಯಾ ವಾಲ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ಮದಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಸಯಾಲಿ ಸಾತ್ಘರೆ, ಶ್ರೇಯಾಂಕ ಪಾಟೀಲ್, ಲಾರೆನ್ ಬೆಲ್

ಡೆಲ್ಲಿ ಕ್ಯಾಪಿಟಲ್ಸ್ (DCW):
ಲಿಝೆಲ್ ಲೀ (ವಿಕೆಟ್ ಕೀಪರ್), ಶಫಾಲಿ ವರ್ಮಾ, ಲಾರಾ ವೋಲ್ವಾರ್ಡ್, ಜೆಮಿಮಾ ರೊಡ್ರಿಗಸ್ (ನಾಯಕ), ಮಾರಿಜಾನ್ ಕಾಪ್, ಚಿನೆಲ್ಲಿ ಹೆನ್ರಿ, ನಿಕಿ ಪ್ರಸಾದ್, ಸ್ನೇಹಾ ರಾಣಾ, ಮಿನ್ನು ಮಣಿ, ಶ್ರೀಚರಣಿ, ನಂದಿನಿ ಶರ್ಮಾ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-05 19:12:15
No Reviews