ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಮುಂದುವರಿಕೆ

ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Bengaluruನಲ್ಲಿ ಮುಂದಿನ ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ತಾಪಮಾನದಲ್ಲೂ ಇಳಿಕೆ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಗರಿಷ್ಠ 34°C ಹಾಗೂ ಕನಿಷ್ಠ 22°C ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಸಂಜೆ ವೇಳೆಗೆ ಮಳೆ ಜೊತೆಗೆ ಮಿಂಚು-ಗುಡುಗು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶ ಹಾಗೂ ಆರ್ದ್ರತೆ ಹೆಚ್ಚಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆ ಇದೆ. ಮಲೆನಾಡಿನ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ ವ್ಯಕ್ತವಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು-ಮಿಂಚು ಸಹಿತ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ಒಳನಾಡಿನ ಭಾಗಗಳಲ್ಲಿ ಈ ಪರಿಸ್ಥಿತಿ ಮುಂದುವರಿಯಲಿದೆ.

ಇದೀಗ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮೇ 15ರ ವೇಳೆಗೆ ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸಲಿದೆ. ನಂತರ ಕೇರಳ ಮೂಲಕ ಕರ್ನಾಟಕಕ್ಕೆ ಆಗಮಿಸಿ, ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-06 11:09:54
No Reviews