ಟೆಂಡರ್‌ ಪ್ರಕ್ರಿಯೆಯಲ್ಲಿ ಅಕ್ರಮಗಳಿಗೆ ಕಡಿವಾಣ

ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಖರೀದಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಕಾನೂನು ಪಾಲನೆ ಖಚಿತಪಡಿಸುವ ಉದ್ದೇಶದಿಂದ ಅ. 8ರಂದು ಜಿಲ್ಲಾ ಪಂಚಾಯಿತಿಯ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕೆಟಿಪಿಪಿ ಕಾಯ್ದೆ ಮತ್ತು ಟೆಂಡರ್ ಪ್ರಕ್ರಿಯೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿ-ಸಿಬ್ಬಂದಿಗೆ ಟೆಂಡರ್ ಆಹ್ವಾನ, ಬಿಡ್ ಪರಿಶೀಲನೆ, ಆಯ್ಕೆ, ಅನುಮೋದನೆ ಮತ್ತು ದಾಖಲೆಗಳ ನಿರ್ವಹಣೆ ಸೇರಿದಂತೆ ವಿವಿಧ ಹಂತಗಳ ಕುರಿತು ಕೆಎಸ್‌ಆರ್‌ಟಿಸಿಯ ನಿವೃತ್ತ ಹಿರಿಯ ಉಗ್ರಾಣ ವ್ಯವಸ್ಥಾಪಕ ಮಹದೇವ್ ಪ್ರಸಾದ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು. 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-10-09 11:45:22
No Reviews