ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ನ್ಯಾಯಾಂಗದ ಮಹತ್ವದ ಹೆಜ್ಜೆ! ಮಕ್ಕಳ ರಕ್ಷಣೆಗೆ ನ್ಯಾಯಾಂಗದ ಖಡಕ್ ಸಂದೇಶ!

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರೆ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅಧ್ಯಕ್ಷತೆ ವಹಿಸಿದ್ದರು. ಹಲವು ಗಣ್ಯರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಬಾಲ್ಯವಿವಾಹದಿಂದ ಮಕ್ಕಳ ಶಿಕ್ಷಣ ಆರೋಗ್ಯ ಮತ್ತು ಭವಿಷ್ಯದ ಮೇಲಾಗುವ ದುಷ್ಪರಿಣಾಮಗಳು ಮಕ್ಕಳ ಮೇಲಿನ ಲೈಂಗಿಕ ಶೋಷಣೆ ತಡೆ ಪೋಕ್ಸೋ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸಂತ್ರಸ್ತ ಮಕ್ಕಳಿಗೆ ಕಾನೂನು ನೆರವು ಒದಗಿಸುವ ಕುರಿತು ಚರ್ಚಿಸಲಾಯಿತು.

ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ನ್ಯಾಯಾಂಗ ಶಿಕ್ಷಣ ಇಲಾಖೆ ಹಾಗೂ ಸ್ವಯಂಸೇವಾ ಸಂಸ್ಥೆಗಳ ನಡುವಿನ ಸಮನ್ವಯದ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಇದೇ ಸಂದರ್ಭದಲ್ಲಿ ಬಾಲ್ಯವಿವಾಹ ತಡೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಗೀತೆಗಳನ್ನು ಬಿಡುಗಡೆ ಮಾಡಲಾಯಿತು.

ಒಟ್ಟಾರೆ ಬಾಲ್ಯವಿವಾಹ ಮುಕ್ತ ಕರ್ನಾಟಕ ನಿರ್ಮಾಣ ಹಾಗೂ ಮಕ್ಕಳ ಮೇಲಿನ ಎಲ್ಲಾ ರೀತಿಯ ಶೋಷಣೆ ಮತ್ತು ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳನ್ನು ಒಂದೇ ವೇದಿಕೆಗೆ ತರುವ ಮೂಲಕ ರಾಜ್ಯಮಟ್ಟದ ಸಮಾಲೋಚನಾ ಸಭೆ ಯಶಸ್ವಿಯಾಯಿತು


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-21 18:25:36
No Reviews