ಇನ್ಸ್ಟಾಗ್ರಾಮ್ ಡಾನ್ ಗೀಳು ತಂದ ದುರಂತ

ಇನ್ಸ್ಟಾಗ್ರಾಮ್‌ನಲ್ಲಿ ‘ಡಾನ್’ ಆಗಿ ಕಾಣಿಸಿಕೊಳ್ಳಬೇಕೆಂಬ ಮನೋಭಾವದಿಂದ ಪ್ರೇರಿತರಾಗಿ ಮೂವರು ಅಪ್ರಾಪ್ತರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಹುಬ್ಬಳ್ಳಿ / ಕುಂದಗೋಳ: ಅಪ್ರಾಪ್ತ ಬಾಲಕರಿಂದಲೇ ಅಪ್ರಾಪ್ತ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಹೃದಯವಿದ್ರಾವಕ ಘಟನೆ ಬುಧವಾರ ಸಂಜೆ ಕುಂದಗೋಳ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯಿಂದ ಇಡೀ ಜಿಲ್ಲೆ ಬೆಚ್ಚಿಬಿದ್ದಿದ್ದು, ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ದುಷ್ಪ್ರಭಾವದ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ.

ಈ ದುರ್ಘಟನೆಯಲ್ಲಿ ಕುಂದಗೋಳ ಪಟ್ಟಣದ ಪೂಜಾರ ಓಣಿಯ ನಿವಾಸಿ ನಿಂಗರಾಜ್ ಅವಾರಿ (16) ಸಾವನ್ನಪ್ಪಿದ್ದಾನೆ. ನಿಂಗರಾಜ್ ಸ್ಥಳೀಯ ಅನುದಾನಿತ ಶಾಲೆಯೊಂದರಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯಾಗಿದ್ದು, ಓದಿನಲ್ಲಿ ಚುರುಕಾಗಿದ್ದ ಹಾಗೂ ಶಿಸ್ತುಪಾಲಕ ಬಾಲಕನಾಗಿದ್ದನೆಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-15 17:59:39
No Reviews