ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಸದ್ಯಕ್ಕೆ ಬಿಡುಗಡೆಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.

ವಿಚಾರಣೆಯನ್ನು ಚುರುಕುಗೊಳಿಸಲು ಸೂಚನೆ ನೀಡಿರುವ ನ್ಯಾಯಪೀಠ, 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಪ್ರಾಸಿಕ್ಯೂಷನ್‌ಗೆ ಗಡುವು ವಿಧಿಸಿದೆ. ಈ ಅವಧಿಯಲ್ಲಿ ಪ್ರಗತಿ ಕಂಡುಬರದಿದ್ದರೆ ಮಾತ್ರ ದರ್ಶನ್ ಪುನಃ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ.

ಕೋರ್ಟ್ ವಿಚಾರಣೆಯ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಅನಗತ್ಯ ಮುಂದೂಡಿಕೆಗಳನ್ನು ತಪ್ಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಜೊತೆಗೆ ಜೈಲಿನಲ್ಲಿ ಮೂಲಭೂತ ಸವಲತ್ತುಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ. 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-15 13:02:52
No Reviews