ರಾಷ್ಟ್ರೋತ್ಸವದ ಸಂಭ್ರಮದಲ್ಲೇ ಆತಂಕ: ದೆಹಲಿಯಲ್ಲಿ ಹೈ ಅಲರ್ಟ್!

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಗಟ್ಟಿಗೊಳಿಸಲಾಗಿದ್ದು, ನಗರವನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ದೆಹಲಿ ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳು ಕಣ್ಗಾವಲು ಹೆಚ್ಚಿಸಿವೆ.

ರೈಲು ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು ಮತ್ತು ಜನದಟ್ಟಣೆಯ ಮಾರುಕಟ್ಟೆಗಳಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕರ ಪೋಸ್ಟರ್‌ಗಳನ್ನು ಅಳವಡಿಸಲಾಗಿದ್ದು, ಬಬ್ಬರ್ ಖಾಲ್ಸಾ, ಜೈಶ್-ಎ-ಮೊಹಮ್ಮದ್ ಹಾಗೂ ಅಲ್-ಖೈದಾ ಸಂಘಟನೆಗಳಿಗೆ ಸಂಬಂಧಿಸಿದ ಶಂಕಿತರ ಚಿತ್ರಗಳು ಇದರಲ್ಲಿ ಸೇರಿವೆ.

ಸಾರ್ವಜನಿಕರು ಜಾಗರೂಕರಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಸದ್ಯ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು, ಸುರಕ್ಷಿತ ಮತ್ತು ಶಾಂತ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-19 11:36:15
No Reviews