ಡ್ರಗ್ಸ್ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಸಮರ

ಮಾದಕವಸ್ತು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಬೆಂಗಳೂರಿನಲ್ಲಿ ರನ್ ಅಗೇನ್ಸ್ಟ್ ಡ್ರಗ್ಸ್ ಜಾಗೃತಿ ಮ್ಯಾರಥಾನ್ ಯಶಸ್ವಿಯಾಗಿ ನಡೆಯಿತು. ಕರ್ನಾಟಕ ಸರ್ಕಾರ KSLSA NCB ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ KSLSA ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ ಶೆಟ್ಟಿ ಭಾಗವಹಿಸಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ಸೆಂಟ್ರಲ್ ಪೋರ್ಟಿಕೊದಿಂದ ಆರಂಭವಾದ ಮ್ಯಾರಥಾನ್ ಫ್ರೀಡಂ ಪಾರ್ಕ್‌ನಲ್ಲಿ ಮುಕ್ತಾಯಗೊಂಡಿತು. ಸಾರ್ವಜನಿಕರು ಯುವಜನತೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉತ್ಸಾಹದಿಂದ ಪಾಲ್ಗೊಂಡು ಮಾದಕವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದರು


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-14 17:31:16
No Reviews