ಎಬೋಲಾ ಭೀತಿ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣಗಳು ವರದಿಯಾಗಿಲ್ಲವಾದರೂ, ಸೋಂಕು ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಜಾಗೃತಿಯನ್ನು ವಹಿಸುವಂತೆ ಸೂಚಿಸಲಾಗಿದೆ.

ಎಬೋಲಾ ರೋಗದ ಲಕ್ಷಣಗಳಿರುವ ವ್ಯಕ್ತಿಯ ರಕ್ತ ಅಥವಾ ದೇಹದ ದ್ರವಗಳೊಂದಿಗೆ ಸಂಪರ್ಕಕ್ಕೆ ಬಂದಿರುವ ಪ್ರಯಾಣಿಕರು ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಗಳಿಗೆ ಅಥವಾ ಹೆಲ್ತ್ ಡೆಸ್ಕ್‌ಗೆ ತಕ್ಷಣ ಮಾಹಿತಿ ನೀಡಬೇಕು. ಇಮಿಗ್ರೇಷನ್ ಕ್ಲಿಯರೆನ್ಸ್‌ಗೆ ಮುನ್ನವೇ ಆರೋಗ್ಯ ತಪಾಸಣೆಗೆ ಸಹಕರಿಸುವುದು ಅನಿವಾರ್ಯವಾಗಿದೆ.


ವಿದೇಶ ಪ್ರಯಾಣ ಮುಗಿಸಿ ಬಂದ 21 ದಿನಗಳ ಒಳಗೆ ಜ್ವರ, ತೀವ್ರ ದೌರ್ಬಲ್ಯ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ, ನಿಮ್ಮ ವಿದೇಶ ಪ್ರಯಾಣದ ಇತಿಹಾಸವನ್ನು ತಪ್ಪದೇ ತಿಳಿಸಬೇಕು. ಡಿಆರ್ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸುಡಾನ್ ದೇಶಗಳಿಂದ ಬರುವ ಪ್ರಯಾಣಿಕರು ವಿಮಾನ ನಿಲ್ದಾಣದ ಆರೋಗ್ಯ ತಪಾಸಣೆಗೆ ಸಂಪೂರ್ಣ ಸಹಕಾರ ನೀಡಬೇಕು.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-23 11:28:02
No Reviews