ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಗಣಪತಿ ದರ್ಶನ ಪಡೆದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರು ವಿಶೇಷ ಪೂಜೆ ಸಲ್ಲಿಸಿ ಉತ್ತಮ ಪ್ರದರ್ಶನಕ್ಕಾಗಿ ಪ್ರಾರ್ಥಿಸಿದರು. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಪ್ರಮುಖ ಆಟಗಾರರು ದೊಡ್ಡ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

ಇನ್ನೊಂದೆಡೆ ತಿಲಕ್ ವರ್ಮಾ ಇತ್ತೀಚಿನ ಪಂದ್ಯಗಳಲ್ಲಿ ಉತ್ತಮ ಫಾರ್ಮ್ ತೋರಿದ್ದು ತಂಡಕ್ಕೆ ಬಲ ನೀಡಿದ್ದಾರೆ. ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಅರ್ಶ್‌ದೀಪ್ ಸಿಂಗ್ ಬದಲು ಕುಲ್‌ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ಇಂದಿನ ಪಂದ್ಯದಲ್ಲಿ ಜಸ್‌ಪ್ರೀತ್ ಬುಮ್ರಾ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದು, ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆಲುವಿನ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾದಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-03-05 17:20:08
No Reviews