ವಿಮಾನ ಲ್ಯಾಂಡಿಂಗ್‌ನಲ್ಲಿ ಆತಂಕಕಾರಿ ಘಟನೆ

ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಶ್ ಏರ್ಲೈನ್ಸ್ ಟಿಕೆ 726 ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಟೈರ್‌ಗೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಸಂಭವಿಸಿದ ಈ ಘಟನೆ ವೇಳೆ ವಿಮಾನದಲ್ಲಿ 278 ಪ್ರಯಾಣಿಕರು ಮತ್ತು 11 ಸಿಬ್ಬಂದಿ ಇದ್ದರು.

ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿಗೆ ಆಗಮಿಸುತ್ತಿದ್ದ ಈ ವಿಮಾನದ ಟೈರ್‌ನಲ್ಲಿ ಲ್ಯಾಂಡಿಂಗ್ ಕ್ಷಣದಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ತುರ್ತು ತಂಡಗಳು ಪ್ರತಿಕ್ರಿಯಿಸಿ ಅಗ್ನಿಯನ್ನು ನಿಯಂತ್ರಣಕ್ಕೆ ತಂದಿವೆ. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ವಿಮಾನದಲ್ಲಿ ವಿಶ್ವಸಂಸ್ಥೆಯ ಹಲವು ಪ್ರತಿನಿಧಿಗಳು ಕೂಡ ಇದ್ದರು ಎಂದು ತಿಳಿದುಬಂದಿದೆ. ತ್ವರಿತ ರಕ್ಷಣಾ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ. ಸದ್ಯ ಯಾವುದೇ ಗಾಯಗಳ ವರದಿ ಇಲ್ಲ.

ಟೈರ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ವಿಮಾನಯಾನ ಅಧಿಕಾರಿಗಳು ತನಿಖೆ ಆರಂಭಿಸುವ ನಿರೀಕ್ಷೆಯಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-11 14:53:18
No Reviews