Shopping cart
Your cart empty!
Terms of use dolor sit amet consectetur, adipisicing elit. Recusandae provident ullam aperiam quo ad non corrupti sit vel quam repellat ipsa quod sed, repellendus adipisci, ducimus ea modi odio assumenda.
Lorem ipsum dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Do you agree to our terms? Sign up
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಮಹತ್ವದ ದಾಖಲೆಗಳು ಹಾಗೂ ಇತರ ಮಾಹಿತಿಗಳ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಕೋಟ್ಯಂತರ ರೂಪಾಯಿ ಹಣಕಾಸು ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಈ ಶೋಧ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.
ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸ ಸೇರಿದಂತೆ ಒಟ್ಟು 21 ಸ್ಥಳಗಳಲ್ಲಿ ಏಕಕಾಲದಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದಾರೆ. KPSC ಸದಸ್ಯೆ ಶಾಂತಾ ಹೊಸಮನಿ, ಪ್ರಕರಣಕ್ಕೆ ಸಂಬಂಧಿಸಿದ ಮಧ್ಯವರ್ತಿಗಳು, ಪತ್ರಿಕೆ ಹಾಗೂ ಡಿಜಿಟಲ್ ಮೌಲ್ಯಮಾಪನ ಸಂಸ್ಥೆಗಳು ಮತ್ತು ಆಯ್ಕೆಗೊಂಡಿರುವ ಕೆಲವು ಅಭ್ಯರ್ಥಿಗಳ ನಿವಾಸಗಳಲ್ಲಿಯೂ ಶೋಧ ನಡೆಸಲಾಗಿದೆ ಎನ್ನಲಾಗಿದೆ.
ED ಅಧಿಕಾರಿಗಳ ತಂಡವು ಸಿಆರ್‌ಪಿಎಫ್ ಯೋಧರ ಭದ್ರತೆಯಲ್ಲಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ನಿವಾಸಗಳು ಹಾಗೂ ಕಚೇರಿಗಳಲ್ಲಿರುವ ದಾಖಲೆಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಬಹುದಾದ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಪಶುವೈದ್ಯ ಮಂಜುನಾಥ್ ಎಂಬವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಇತರರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
KPSC ವತಿಯಿಂದ ನಡೆದ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇತ್ತೀಚೆಗೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದರಲ್ಲಿ 342 ಸಾಮಾನ್ಯ ಹುದ್ದೆಗಳು ಹಾಗೂ 58 ಬ್ಯಾಕ್‌ಲಾಗ್ ಹುದ್ದೆಗಳು ಸೇರಿದ್ದವು. ನೇಮಕಾತಿಗಾಗಿ ಜನವರಿಯಲ್ಲಿ ಪರೀಕ್ಷೆ ನಡೆದಿದ್ದು, ಜುಲೈ 17ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.
ಆದರೆ ಅಂತಿಮ ಆಯ್ಕೆ ಪಟ್ಟಿಯ ಪ್ರಕಟಣೆಯ ಬಳಿಕ ಕೆಲವು ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದರು. ಹುದ್ದೆ ಕೊಡಿಸುವುದಾಗಿ ಹೇಳಿ ಮಧ್ಯವರ್ತಿಗಳು ಅಭ್ಯರ್ಥಿಗಳಿಂದ ₹70 ಲಕ್ಷದಿಂದ ₹80 ಲಕ್ಷದವರೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಇದರ ಜೊತೆಗೆ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆಗೂ ಮುನ್ನವೇ ಕೆಲವು ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಸಂಬಂಧಿಸಿದ ಮಾಹಿತಿ ನೀಡಿರುವುದು ಹಾಗೂ OMR ಉತ್ತರ ಪತ್ರಿಕೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು. ಆದರೆ ಈ ಎಲ್ಲಾ ಆರೋಪಗಳು ಸದ್ಯ ತನಿಖೆಯ ಹಂತದಲ್ಲಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.
ನೇಮಕಾತಿ ಪ್ರಕ್ರಿಯೆಯ ವಿರುದ್ಧ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ KPSC ಪಶು ವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆಹಿಡಿದು ಆಂತರಿಕ ತನಿಖಾ ಸಮಿತಿಯನ್ನು ರಚಿಸಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (CID) ವಹಿಸಿತ್ತು.
ಈ ಪ್ರಕರಣದಲ್ಲಿ ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಆಯೋಗದ ಕೆಲವು ಅಧಿಕಾರಿಗಳು ಹಾಗೂ ಆಯ್ಕೆ ಪಟ್ಟಿಯಲ್ಲಿದ್ದ ಕೆಲವು ಅಭ್ಯರ್ಥಿಗಳ ವಿರುದ್ಧವೂ FIR ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು CID ಅಧಿಕಾರಿಗಳು ಮುಂದುವರಿಸುತ್ತಿರುವ ಬೆನ್ನಲ್ಲೇ ಇದೀಗ ED ಅಧಿಕಾರಿಗಳು ಸಹ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಅವರ ಇಬ್ಬರು ಪುತ್ರಿಯರ ಸರ್ಕಾರಿ ನೇಮಕಾತಿಗೆ ಸಂಬಂಧಿಸಿದಂತೆ ಸ್ವಜನಪಕ್ಷಪಾತದ ಆರೋಪಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಜುಲೈ 13ರಂದು ಅವರನ್ನು ಅಮಾನತುಗೊಳಿಸಿದ್ದರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ರಾಜ್ಯದ ತನಿಖಾ ಸಂಸ್ಥೆಗಳು ಚುರುಕುಗೊಳಿಸಿದ್ದವು.
ಇದೀಗ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಹಣಕಾಸು ವ್ಯವಹಾರಗಳು ಹಾಗೂ ಇತರ ಆರೋಪಗಳ ಹಿನ್ನೆಲೆಯಲ್ಲಿ ED ಅಧಿಕಾರಿಗಳು ಬೆಂಗಳೂರು, ಕಲಬುರಗಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. 21 ಸ್ಥಳಗಳಲ್ಲಿ ನಡೆದಿರುವ ಈ ಶೋಧ ಕಾರ್ಯಾಚರಣೆಯಿಂದ ಪ್ರಕರಣದ ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದ್ದು, ಅಧಿಕಾರಿಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.