ಗಿರಿ ಬಾಬು ನಿಧನಕ್ಕೆ ಚಿತ್ರರಂಗ ಕಂಬನಿ!

ತೆಲುಗು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಗಿರಿ ಬಾಬು 80 ಅವರು ಇಂದು ನವೆಂಬರ್ 14 ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತೆಲುಗು ಚಿತ್ರರಂಗದಲ್ಲಿ ದುಃಖದ ಛಾಯೆ ಮೂಡಿಸಿದೆ.

ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಗಿರಿ ಬಾಬು, ನಾಯಕ, ಖಳನಟ, ಹಾಸ್ಯನಟ ಹಾಗೂ ಪೋಷಕ ನಟನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು. ವಿಭಿನ್ನ ಅಭಿನಯ ಶೈಲಿ ಮತ್ತು ವಿಶಿಷ್ಟ ಸಂಭಾಷಣೆಯ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಅವರು, ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಹಲವು ತಲೆಮಾರಿನ ಕಲಾವಿದರೊಂದಿಗೆ ತೆರೆ ಹಂಚಿಕೊಂಡಿದ್ದರು. ಅವರ ಅಗಲಿಕೆಯಿಂದ ತೆಲುಗು ಚಿತ್ರರಂಗ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಿದೆ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-14 18:44:47
No Reviews