ಗುಜರಾತ್ ವಿರುದ್ಧದ ಕೊನೆ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯಲಿದ್ದಾರಾ?

ಅಹಮದಾಬಾದ್‌, ಮೇ 21: ಇಂದು (ಗುರುವಾರ) ಐಪಿಎಲ್ 2026 ರಲ್ಲಿ ಪ್ಲೇ-ಆಫ್ ಸ್ಥಾನವನ್ನು ಈಗಾಗಲೇ ಖಚಿತಪಡಿಸಿಕೊಂಡಿರುವ ಗುಜರಾತ್ ಟೈಟಾನ್ಸ್ (GT vs CSK) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇನ್ನೊಂದೆಡೆ ಚೆನ್ನೈಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, 13 ಪಂದ್ಯಗಳಲ್ಲಿ 12 ಅಂಕಗಳೊಂದಿಗೆ ತಂಡ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕು. ಸೋಲಿನ ಪರಿಸ್ಥಿತಿಯಲ್ಲಿ ಚೆನ್ನೈ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ. ಇತ್ತೀಚೆಗೆ ನಡೆದ ಮುಖಾಮುಖಿಯಲ್ಲಿ ಗುಜರಾತ್ 8 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತ್ತು.

ಧೋನಿ ಆಡ್ತಾರಾ ಕೊನೆಯ ಪಂದ್ಯದಲ್ಲಿ?

ಗಾಯ ಮತ್ತು ಫಿಟ್ನೆಸ್ ಸಮಸ್ಯೆಯಿಂದ ಈ ಸೀಸನ್‌ನಲ್ಲಿ ಇದುವರೆಗೆ ಒಂದೂ ಪಂದ್ಯ ಆಡದ ಮಹೇಂದ್ರ ಸಿಂಗ್ ಧೋನಿ ಈ ಕೊನೆಯ ಪಂದ್ಯದಲ್ಲಾದರೂ ಕಣಕ್ಕಿಳಿಯಲಿದ್ದಾರಾ ಎಂಬುದು ಅಭಿಮಾನಿಗಳ ಪ್ರಮುಖ ಕುತೂಹಲವಾಗಿದೆ. ಧೋನಿ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದು ವಿದಾಯ ಹೇಳಿದರೂ ಅಚ್ಚರಿಯಿಲ್ಲ ಎಂಬ ಚರ್ಚೆಯೂ ಕ್ರಿಕೆಟ್ ವಲಯದಲ್ಲಿ ನಡೆಯುತ್ತಿದೆ.

ಪಿಚ್ ರಿಪೋರ್ಟ್ – ಅಹಮದಾಬಾದ್

ನರೇಂದ್ರ ಮೋದಿ ಸ್ಟೇಡಿಯಂ ಆರಂಭದಲ್ಲಿ ಬ್ಯಾಟಿಂಗ್‌ಗೆ ನೆರವಾಗುವ ಪಿಚ್ ನೀಡುತ್ತಿತ್ತು. ಆದರೆ ಇತ್ತೀಚಿನ ಪಂದ್ಯಗಳಲ್ಲಿ ಸ್ಕೋರ್ ಕಡಿಮೆಯಾಗುತ್ತಿದೆ. ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತ ಸುಮಾರು 162 ರನ್ ಆಗಿದ್ದು, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಮಳೆ ಭೀತಿ ಇಲ್ಲದ ಕಾರಣ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಮುಖಾಮುಖಿ ದಾಖಲೆ

ಇದುವರೆಗೆ ಆಡಿದ 9 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ 5 ಗೆಲುವು, ಚೆನ್ನೈ ಸೂಪರ್ ಕಿಂಗ್ಸ್ 4 ಗೆಲುವು ಸಾಧಿಸಿದೆ.

ತಂಡಗಳು

ಗುಜರಾತ್ ಟೈಟಾನ್ಸ್ (GT):
ಶುಭಮನ್ ಗಿಲ್ (ನಾಯಕ), ಬಿ. ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.
ಇಂಪ್ಯಾಕ್ಟ್ ಆಟಗಾರ: ರಾಹುಲ್ ತೆವಾಟಿಯಾ

ಚೆನ್ನೈ ಸೂಪರ್ ಕಿಂಗ್ಸ್ (CSK):
ಋತುರಾಜ್ ಗಾಯಕ್ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಉರ್ವಿಲ್ ಪಟೇಲ್, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅಕೇಲ್ ಹೊಸೈನ್, ಅನ್ಶುಲ್ ಕಾಂಬೋಜ್, ಸ್ಪೆನ್ಸರ್ ಜಾನ್ಸನ್, ನೂರ್ ಅಹ್ಮದ್, ಮುಖೇಶ್ ಚೌಧರಿ.
ಇಂಪ್ಯಾಕ್ಟ್ ಆಟಗಾರ: ಕಾರ್ತಿಕ್ ಶರ್ಮಾ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-21 11:24:55
No Reviews