ಕರ್ನಾಟಕದಲ್ಲಿ ವರುಣನ ಆರ್ಭಟ: ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ (Karnataka Weather). ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

ಜುಲೈ 4 ಮತ್ತು 5 ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆ ಇದೆ ಎಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 5 ರಿಂದ 7ರವರೆಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯ ನಿರೀಕ್ಷೆ ಇದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಇನ್ನುಳಿದ ಭಾಗಗಳಲ್ಲಿ ಜೂನ್ 28ರವರೆಗೆ ಸಾಧಾರಣ ಮಳೆಯ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26°C ಹಾಗೂ ಕನಿಷ್ಠ 22°C ಇರಲಿದ್ದು, ಮಡಿಕೇರಿಯಲ್ಲಿ ಗರಿಷ್ಠ 22°C ಮತ್ತು ಕನಿಷ್ಠ 20°C ದಾಖಲಾಗುವ ಸಾಧ್ಯತೆ ಇದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-07-04 12:23:38
No Reviews