ಬಸ್‌ವೊಂದಕ್ಕೆ ಲಾರಿ ಡಿಕ್ಕಿಯಾಗಿ ಬೆಂಕಿ ಹೊತ್ತಿದ ಕಾರಣ 10 ಕ್ಕೂ ಹೆಚ್ಚು ಮಂದಿ ಸಜೀವ ದಹನ..!

 

ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2025-12-26 12:46:35
No Reviews