‘ಕರುಪ್ಪು’ ಸಿನಿಮಾ ಸಕ್ಸಸ್ ಸ್ಟೋರಿ: 5 ದಿನಕ್ಕೆ 160 ಕೋಟಿ ಕ್ಲಬ್‌ಗೆ ಎಂಟ್ರಿ

ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗೆಲುವಿನ ಓಟ ಮುಂದುವರಿಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಈ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ, ಇದೀಗ ಜಾಗತಿಕ ಮಟ್ಟದಲ್ಲಿ 160 ಕೋಟಿ ರೂ. ಗಡಿ ದಾಟಿ ಸಂಚಲನ ಸೃಷ್ಟಿಸಿದೆ.

ಸ್ಯಾಕ್‌ನಿಲ್ಕ್ ವರದಿ ಪ್ರಕಾರ, ಚಿತ್ರದ 5ನೇ ದಿನದ ಭಾರತದಲ್ಲಿನ ನಿವ್ವಳ ಗಳಿಕೆ ಸುಮಾರು 12.75 ಕೋಟಿ ರೂ. ಆಗಿದೆ. ಸೋಮವಾರದ ಕಲೆಕ್ಷನ್‌ಗೆ ಹೋಲಿಸಿದರೆ ಕೇವಲ ಅಲ್ಪ ಪ್ರಮಾಣದ ಇಳಿಕೆ ಕಂಡಿದ್ದು, ಸಿನಿಮಾ ಇನ್ನೂ ಬಾಕ್ಸ್ ಆಫೀಸ್‌ನಲ್ಲಿ ಬಲಿಷ್ಠವಾಗಿ ಸಾಗುತ್ತಿದೆ ಎಂಬುದನ್ನು ಇದು ತೋರಿಸಿದೆ.

‘ಕರುಪ್ಪು’ ಸಿನಿಮಾ ಈಗಾಗಲೇ ಭಾರತದಲ್ಲೇ 110 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದ್ದು, ಕರ್ನಾಟಕದಲ್ಲೂ ಸುಮಾರು 13 ಕೋಟಿ ರೂ. ಗಳಿಕೆ ಕಂಡಿದೆ. ತಮಿಳುನಾಡು ಮಾತ್ರವಲ್ಲದೆ, ಇತರ ರಾಜ್ಯಗಳು ಹಾಗೂ ವಿದೇಶಗಳಲ್ಲೂ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

ಕಳೆದ ಹಲವು ವರ್ಷಗಳಿಂದ ದೊಡ್ಡ ಗೆಲುವಿಗಾಗಿ ಕಾಯುತ್ತಿದ್ದ ನಟ ಸೂರ್ಯ ಅವರಿಗೆ ‘ಕರುಪ್ಪು’ ಮೂಲಕ ಬ್ಲಾಕ್‌ಬಸ್ಟರ್ ಹಿಟ್ ಸಿಕ್ಕಂತಾಗಿದೆ. ಈ ಸಿನಿಮಾದ ಯಶಸ್ಸು ಅವರ ಸೋಲಿನ ಸರಣಿಗೆ ಬ್ರೇಕ್ ಹಾಕಿದ್ದು, ಅಭಿಮಾನಿಗಳಲ್ಲೂ ಹೊಸ ಉತ್ಸಾಹ ಮೂಡಿಸಿದೆ.

ಆರ್‌.ಜೆ. ಬಾಲಾಜಿ ನಿರ್ದೇಶನದ ಈ ಚಿತ್ರವನ್ನು ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ನಿರ್ಮಿಸಿದೆ. ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಜೊತೆಗೆ ಶಿವದಾ, ಯೋಗಿ ಬಾಬು, ಸ್ವಾಸಿಕಾ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-20 15:01:33
No Reviews