KPTCL ನೂತನ MDಯಾಗಿ ಡಾ. ಮನೋಹರ್ ನೇಮಕ

ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರದ ಆದೇಶದನ್ವಯ, ಡಾ. ಮನೋಹರ್ ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷ ಸ್ಥಾನವನ್ನು ಮುಂದುವರಿಸಿಕೊಳ್ಳುವ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ಸಹ ವಹಿಸಿಕೊಳ್ಳಲಿದ್ದಾರೆ.

ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಂಕಜ್ ಕುಮಾರ್ ಪಾಂಡೆ ಅವರು ಡಾ. ರಾಮ್ ಪ್ರಸಾತ್ ಮನೋಹರ್ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು. ಆಡಳಿತಾತ್ಮಕ ಅನುಭವ ಮತ್ತು ಕಾರ್ಯಕ್ಷಮತೆಯೊಂದಿಗೆ ಡಾ. ಮನೋಹರ್ ಅವರ ನೇತೃತ್ವದಲ್ಲಿ ಕೆಪಿಟಿಸಿಎಲ್ ಮತ್ತಷ್ಟು ಬಲಿಷ್ಠವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-02 17:08:48
No Reviews