ರಸ್ತೆ ಮಧ್ಯದಲ್ಲಿ KSRTC ಬಸ್‌ಗೆ ಬೆಂಕಿ

ಬೆಂಗಳೂರುದಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೆಂಕಿಗಾಹುತಿಯಾಗಿದೆ. ಚಾಲಕ ಪಕ್ಕೀರಪ್ಪ ಅವರ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 17 ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಣೆ ಮಾಡಲಾಗಿದೆ.

ಚಾಲಕನು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಬಸ್‌ನ್ನು ಸಂಪೂರ್ಣವಾಗಿ ಆವರಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು—ತಾಂತ್ರಿಕ ದೋಷವೋ ಅಥವಾ ಎಂಜಿನ್ ಸಮಸ್ಯೆಯೋ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಇನ್ನೊಂದೆಡೆ, ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿದ್ದಾರೆ. ಒಬ್ಬ ಬಾಲಕ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ದುರ್ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-05 12:18:32
No Reviews