ವಾರಾಹಿ ನೀರಾವರಿ ಯೋಜನೆ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ವಾರಾಹಿ ನೀರಾವರಿ ಯೋಜನೆ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದ ಯೋಜನೆ. ತಾಂತ್ರಿಕ ತಂಡ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಲಭ್ಯವಿದೆ. ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ. ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವಕರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ 77ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಪರಶುರಾಮ ಕರಾವಳಿಗರ ಆರಾಧ್ಯದೈವ. ಈ ವಿಚಾರದಲ್ಲಿ ರಾಜಕಾರಣ ಮಾಡುವುದು ನಮಗೆ ಇಷ್ಟವಿಲ್ಲ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಫೈಬರ್‌ನಲ್ಲಿಯೇ ಪರಶುರಾಮನ ಮೂರ್ತಿ ನಿರ್ಮಿಸಿ ಕಂಚಿನದು ಎಂದು ಜನರನ್ನು ನಂಬಿಸಿ ರಾಜಕೀಯ ಮಾಡಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಉಡುಪಿ ಪರ್ಯಾಯ ಒಂದು ಪವಿತ್ರ ಧಾರ್ಮಿಕ ಸಂಪ್ರದಾಯ. ಧ್ವಜ ಹಾರಿಸಿದ ವಿಚಾರವನ್ನು ಅಲ್ಲಿಗೇ ಬಿಡಿ ಎಂದು ಜಿಲ್ಲಾಧಿಕಾರಿ ಭಗವಧ್ವಜ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ದ್ವೇಷ ಭಾಷಣ ವಿರುದ್ಧ ತರಲಾಗಿರುವ ಮಸೂದೆ ದೇಶದ ಐಕ್ಯತೆ ಮತ್ತು ಸಮಗ್ರತೆಯ ರಕ್ಷಣೆಯ ಉದ್ದೇಶ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-26 18:48:59
No Reviews