ಮಹಾರಾಷ್ಟ್ರ ರಾಜಕೀಯದಲ್ಲಿ ಇತಿಹಾಸ: ಸುನೇತ್ರಾ ಪವಾರ್‌ ಉಪಮುಖ್ಯಮಂತ್ರಿ

ಮಹಾರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಮಹಿಳೆ ಎಂಬ ಅಪೂರ್ವ ಗೌರವಕ್ಕೆ ಸುನೇತ್ರಾ ಪವಾರ್ ಪಾತ್ರರಾಗಿದ್ದಾರೆ. 62 ವರ್ಷದ ಸುನೇತ್ರಾ ಮುಂಬೈನ ಲೋಕ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಅದಕ್ಕೂ ಮುನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜತೆ ಚರ್ಚೆ ನಡೆಸಿ, ಬಳಿಕ ಅಜಿತ್ ಪವಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದರು.

ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆರು ತಿಂಗಳೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕು ಅಥವಾ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಳ್ಳಬೇಕಿದೆ. ಅಜಿತ್ ಪವಾರ್ ನಿಧನದಿಂದ ಖಾಲಿಯಾದ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಸುನೇತ್ರಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-31 17:24:18
No Reviews