Shopping cart
Your cart empty!
Terms of use dolor sit amet consectetur, adipisicing elit. Recusandae provident ullam aperiam quo ad non corrupti sit vel quam repellat ipsa quod sed, repellendus adipisci, ducimus ea modi odio assumenda.
Lorem ipsum dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Do you agree to our terms? Sign up
India vs New Zealand:
ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ಆರಂಭ ಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ, ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ 48 ರನ್‌ಗಳ ಜಯ ದಾಖಲಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿತು.
208 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭ ಉತ್ತಮವಾಗಿರಲಿಲ್ಲ. ಕೇವಲ 6 ರನ್‌ಗಳಲ್ಲೇ ಸಂಜು ಸ್ಯಾಮ್ಸನ್ (6) ಮತ್ತು ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡರು. ಈ ಸಂಕಷ್ಟದ ಹೊತ್ತಿನಲ್ಲಿ ಕ್ರೀಸ್‌ಗೆ ಬಂದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಪಂದ್ಯದ ಚಿತ್ರಣವನ್ನೇ ಬದಲಿಸಿದರು.
ಇಶಾನ್ ಕಿಶನ್ ಕ್ರೀಸ್‌ಗೆ ಬಂದ ತಕ್ಷಣವೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ನ್ಯೂಝಿಲೆಂಡ್ ಬೌಲರ್‌ಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸಿದ ಇಶಾನ್, ಕೇವಲ 32 ಎಸೆತಗಳಲ್ಲಿ 11 ಫೋರ್ ಮತ್ತು 4 ಸಿಕ್ಸರ್‌ಗಳೊಂದಿಗೆ 76 ರನ್‌ಗಳ ಮಿಂಚಿನ ಇನಿಂಗ್ಸ್ ಆಡಿದರು. ಮೂರನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಜೊತೆ 116 ರನ್‌ಗಳ ಅಮೂಲ್ಯ ಜೊತೆಯಾಟವೂ ನಿರ್ಮಿಸಿದರು.
ಇಶಾನ್ ಔಟಾದ ಬಳಿಕ ಸಂಪೂರ್ಣ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡ ನಾಯಕ ಸೂರ್ಯಕುಮಾರ್ ಯಾದವ್, ತಮ್ಮ ಕ್ಲಾಸಿಕ್ ಶೈಲಿಯ ಬ್ಯಾಟಿಂಗ್ ಮೂಲಕ ಮೈದಾನದ ಎಲ್ಲ ಭಾಗಗಳಿಗೂ ಶಾಟ್‌ಗಳನ್ನು ಬಾರಿಸಿದರು. ಸೂರ್ಯ 37 ಎಸೆತಗಳಲ್ಲಿ 9 ಫೋರ್ ಮತ್ತು 4 ಸಿಕ್ಸರ್‌ಗಳೊಂದಿಗೆ ಅಜೇಯ 82 ರನ್‌ಗಳನ್ನು ಬಾರಿಸಿ, ಭಾರತ ತಂಡವನ್ನು 15.2 ಓವರ್‌ಗಳಲ್ಲೇ ಗೆಲುವಿನ ದಡ ಸೇರಿಸಿದರು.
ಈ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಮಾಡಿದವರು ಸೂರ್ಯಕುಮಾರ್ ಯಾದವ್ ಆಗಿದ್ದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಇಶಾನ್ ಕಿಶನ್ ಪಾಲಾಯಿತು. ಇದರ ಹಿಂದೆ ಸ್ಪಷ್ಟ ಕಾರಣವೂ ಇದೆ.
ಆರಂಭಿಕ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಪಾರು ಮಾಡಿದ್ದು ಇಶಾನ್ ಕಿಶನ್ ಅವರ ಸಿಡಿಲಬ್ಬರದ ಇನಿಂಗ್ಸ್. ಅವರ ಆಕ್ರಮಣಕಾರಿ ಆಟದಿಂದ ಪಂದ್ಯದ ವೇಗ ಸಂಪೂರ್ಣವಾಗಿ ಭಾರತ ಪರವಾಗಿ ತಿರುಗಿತು. ಇದರಿಂದ ಉಳಿದ ಬ್ಯಾಟರ್‌ಗಳ ಮೇಲಿದ್ದ ಒತ್ತಡವೂ ಕಡಿಮೆಯಾಯಿತು.
ಅದಕ್ಕಾಗಿ ಅಜೇಯ 82 ರನ್‌ಗಳ ಸೂರ್ಯನ ಇನಿಂಗ್ಸ್‌ಗಿಂತ, ಪಂದ್ಯ ದಿಕ್ಕು ಬದಲಿಸಿದ ಇಶಾನ್ ಕಿಶನ್ ಅವರ 76 ರನ್‌ಗಳ ಇನಿಂಗ್ಸ್‌ಗೆ ಹೆಚ್ಚಿನ ಮಹತ್ವ ನೀಡಲಾಯಿತು.
ವಿಶೇಷವೆಂದರೆ, ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗೆಲ್ಲುತ್ತಿರುವುದು ಬರೋಬ್ಬರಿ 4 ವರ್ಷಗಳ ಬಳಿಕ. ಇದಕ್ಕೂ ಮುನ್ನ ಅವರು 2022ರಲ್ಲಿ ಶ್ರೀಲಂಕಾ ವಿರುದ್ಧ ಈ ಗೌರವ ಪಡೆದಿದ್ದರು. ಇದೀಗ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ‘ಪಾಕೆಟ್ ಡೈನಾಮೊ’ ಮತ್ತೆ ಸುದ್ದಿಯಲ್ಲಿದ್ದಾರೆ.