ನೀಟ್ ಪರೀಕ್ಷೆಗೆ ದೊಡ್ಡ ಬದಲಾವಣೆ

ಮುಂದಿನ ವರ್ಷದಿಂದ ನೀಟ್-ಯುಜಿ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ CBT ಮಾದರಿಯಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ NEET UG 2026 ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ಪ್ರಕಟಿಸಿದೆ. ಜೂನ್ 14ರೊಳಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳ ಕುರಿತ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಕೆಲವು ಊಹೆ ಪತ್ರಿಕೆಗಳ ಪ್ರಶ್ನೆಗಳು ಮೂಲ ಪರೀಕ್ಷೆಯಲ್ಲಿಯೂ ಕಂಡುಬಂದಿರುವ ಬಗ್ಗೆ ಗಂಭೀರ ಆಕ್ಷೇಪಣೆಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳ ನ್ಯಾಯಯುತ ಅವಕಾಶಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗಿದೆ.

ಅಧಿಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಮತ್ತು ಪೋಷಕರು ಕೇವಲ NTA ಪ್ರಕಟಣೆಗಳನ್ನೇ ಅವಲಂಬಿಸಬೇಕು ಎಂದು ಸಂಸ್ಥೆ ಸಲಹೆ ನೀಡಿದೆ. 


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-15 12:57:52
No Reviews