ಈ ಬಾರಿಯ ಬಜೆಟ್ ಘೋಷಣೆಗಳಲ್ಲಿ ಬೆಂಗಳೂರಿನ ಜನತೆಗೆ ಹೈಸ್ಪೀಡ್ ರೈಲು!

2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗಾಗಿ ದಾಖಲೆ ಮಟ್ಟದ 7,748 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ಅವರು ಘೋಷಿಸಿದ್ದಾರೆ.

ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಸಚಿವರು, "ರಾಜ್ಯದಲ್ಲಿ ಪ್ರಸ್ತುತ 52,950 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ಹಳಿಗಳ ನಿರ್ಮಾಣ, ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ," ಎಂದು ವಿವರಿಸಿದರು. ಕಳೆದ ದಶಕದ ಸರಾಸರಿ ಹಂಚಿಕೆಗೆ ಹೋಲಿಸಿದರೆ ಇದು ಹತ್ತು ಪಟ್ಟು ಹೆಚ್ಚು ಎಂಬುದು ಕೇಂದ್ರ ಸರ್ಕಾರದ ವಾದವಾಗಿದೆ.


ಹೈಸ್ಪೀಡ್ ರೈಲು ಮತ್ತು ಅಮೃತ್ ಭಾರತ್ ಯೋಜನೆ: ಬದಲಾಗಲಿದೆ ಕರ್ನಾಟಕದ ರೈಲ್ವೆ ಚಿತ್ರಣ

ಈ ಬಾರಿಯ ಬಜೆಟ್ ಘೋಷಣೆಗಳಲ್ಲಿ ಬೆಂಗಳೂರಿನ ಜನತೆಗೆ ಹೈಸ್ಪೀಡ್ ರೈಲು ಕಾರಿಡಾರ್‌ಗಳ ಸುದ್ಧಿ ಹೊಸ ಆಶಾವಾದ ಮೂಡಿಸಿದೆ. ಪ್ರಮುಖ ಮುಖ್ಯಾಂಶಗಳು ಇಲ್ಲಿವೆ:

  • ಬೆಂಗಳೂರು-ಚೆನ್ನೈ ಹೈಸ್ಪೀಡ್: ಇವೆರಡು ನಗರಗಳ ನಡುವಿನ ಪ್ರಯಾಣದ ಸಮಯ ಕೇವಲ 1 ಗಂಟೆ 13 ನಿಮಿಷಕ್ಕೆ ಇಳಿಕೆಯಾಗಲಿದೆ.

  • ಬೆಂಗಳೂರು-ಹೈದರಾಬಾದ್: ಈ ಮಾರ್ಗದಲ್ಲಿ ಕೇವಲ 2 ಗಂಟೆಗಳಲ್ಲಿ ಪ್ರಯಾಣಿಸಬಹುದು. ಇದರಿಂದ ಐಟಿ ಮತ್ತು ಕೈಗಾರಿಕಾ ವಲಯಕ್ಕೆ ಹೆಚ್ಚಿನ ವೇಗ ಸಿಗಲಿದೆ.

  • ನಿಲ್ದಾಣಗಳ ಅಭಿವೃದ್ಧಿ: 'ಅಮೃತ್ ಭಾರತ್ ನಿಲ್ದಾಣ' ಯೋಜನೆಯಡಿ ಕರ್ನಾಟಕದ 61 ರೈಲು ನಿಲ್ದಾಣಗಳನ್ನು 2,110 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ. ಈಗಾಗಲೇ ಬಾಗಲಕೋಟೆ, ಧಾರವಾಡ ಸೇರಿದಂತೆ ಹಲವು ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿದೆ.

  • ವಿದ್ಯುದ್ದೀಕರಣ ಮತ್ತು ಸುರಕ್ಷತೆ: ರಾಜ್ಯದ 97% ರೈಲ್ವೆ ಜಾಲ ವಿದ್ಯುದ್ದೀಕರಣಗೊಂಡಿದೆ. ಬೆಂಗಳೂರು-ಮೈಸೂರು ಮಾರ್ಗದಲ್ಲಿ 72.76 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಸಿಗ್ನಲ್ ವ್ಯವಸ್ಥೆ ಅಳವಡಿಸಲಾಗುತ್ತಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, "ಅಭಿವೃದ್ಧಿಯ ವಿಷಯದಲ್ಲಿ ರಾಜ್ಯ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡಬಾರದು. ಕೇಂದ್ರದೊಂದಿಗೆ ಸಮನ್ವಯದಿಂದ ಕೆಲಸ ಮಾಡಿದರೆ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-03 10:30:59
No Reviews