ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ

ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ನಿರೀಕ್ಷೆಯಿದ್ದು, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಮೇ 6 ಮತ್ತು 7 ರಂದು ಕೆಲವೆಡೆ ಭಾರೀ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಇಲಾಖೆ ಎಚ್ಚರಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-05-05 12:49:07
No Reviews