ರಾಜಸ್ಥಾನ್‌ ಟಾಪ್‌ನಲ್ಲಿ ಹೈದರಾಬಾದ್‌ 4ನೇ ಸ್ಥಾನಕ್ಕೆ

ಸೋಮವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಜಯ ಸಾಧಿಸಿದ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ 2026 ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಐದು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ನಾಲ್ಕು ಅಂಕ ಹಾಗೂ +0.576 ರನ್‌ರೇಟ್‌ ಪಡೆದು ಈ ಏರಿಕೆಯನ್ನು ಸಾಧಿಸಿದೆ.

ಇನ್ನೊಂದೆಡೆ, ಋತುವಿನ ಮೊದಲ ಸೋಲು ಕಂಡರೂ ರಾಜಸ್ಥಾನ ರಾಯಲ್ಸ್ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಎಂಟು ಅಂಕ ಪಡೆದು +0.889 ರನ್‌ರೇಟ್‌ನೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಪಂಜಾಬ್ ಕಿಂಗ್ಸ್ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಒಂದು ಫಲಿತಾಂಶವಿಲ್ಲದೆ ಏಳು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು, ಒಂದು ಸೋಲಿನಿಂದ ಆರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು, +1.148 ಅತ್ಯುತ್ತಮ ರನ್‌ರೇಟ್‌ ಹೊಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ಕೂಡ ನಾಲ್ಕು ಅಂಕಗಳನ್ನು ಹೊಂದಿದ್ದರೂ -0.029 ರನ್‌ರೇಟ್‌ನಿಂದ ಆರನೇ ಸ್ಥಾನದಲ್ಲಿದೆ. ಲಖನೌ ಸೂಪರ್ ಜೈಂಟ್ಸ್ ಏಳನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ಎರಡು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಕೆಕೆಆರ್ ಪಟ್ಟಿಯ ಕೊನೆಯ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಚ್ ಕ್ಲಾಸೆನ್ ಐದು ಪಂದ್ಯಗಳಲ್ಲಿ 224 ರನ್‌ ಗಳಿಸಿ ಅಗ್ರಸ್ಥಾನಕ್ಕೇರಿದ್ದಾರೆ. 213 ರನ್‌ ಗಳಿಸಿರುವ ಇಶಾನ್ ಕಿಶನ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಗುಜರಾತ್ ಟೈಟಾನ್ಸ್‌ನ ಕನ್ನಡಿಗ ಪ್ರಸಿದ್ಧ್ ಕೃಷ್ಣ 10 ವಿಕೆಟ್‌ಗಳೊಂದಿಗೆ ಮುನ್ನಡೆಯಲ್ಲಿದ್ದಾರೆ. ರಾಜಸ್ಥಾನ ರಾಯಲ್ಸ್‌ನ ರವಿ ಬಿಷ್ಣೋಯ್ 9 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-04-14 10:15:24
No Reviews