Shopping cart
Your cart empty!
Terms of use dolor sit amet consectetur, adipisicing elit. Recusandae provident ullam aperiam quo ad non corrupti sit vel quam repellat ipsa quod sed, repellendus adipisci, ducimus ea modi odio assumenda.
Lorem ipsum dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Do you agree to our terms? Sign up
ಬೆಂಗಳೂರು, ಜು.1: ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಸಸಿ ನೆಡುವಿಕೆ ಮತ್ತು ನಾಯಿಗಳ ಸಂತಾನಹರಣ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅಶೋಕ್, “ಸಚಿವರೇ ಸರ್ಕಾರದ ಅವ್ಯವಸ್ಥೆಯನ್ನು ಬಯಲು ಮಾಡಿದ್ದಾರೆ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಟೀಕಿಸಿದ್ದಾರೆ.
ಸಚಿವ ಕೃಷ್ಣಭೈರೇಗೌಡ ಅವರು ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದ ವಿಚಾರವನ್ನು ಉಲ್ಲೇಖಿಸಿರುವ ಅಶೋಕ್, “ಕೇವಲ ಸಭೆಗಳಲ್ಲಿ ಸಣ್ಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ರೀಲ್ಸ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಅಕ್ರಮದ ಹಿಂದಿರುವ ದೊಡ್ಡವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ಸರ್ಕಾರದ ಆಡಳಿತ ವೈಫಲ್ಯದಿಂದಲೇ ಇಂತಹ ಅಕ್ರಮಗಳಿಗೆ ಅವಕಾಶ ಸಿಕ್ಕಿದೆ ಎಂದು ಆರೋಪಿಸಿರುವ ಅವರು, ಜನರ ತೆರಿಗೆ ಹಣವನ್ನು ವಾಪಸ್ ಪಡೆಯುವಂತೆ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಒಂದು ಸಸಿ ನೆಡಲು ₹3,108 ವರೆಗೆ ವೆಚ್ಚ ತೋರಿಸಲಾಗುತ್ತಿದೆ. ಆದರೆ ನೆಲಮಟ್ಟದಲ್ಲಿ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.
ಅದೇ ರೀತಿ, ಕಳೆದ ಐದು ವರ್ಷಗಳಲ್ಲಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ₹42.50 ಕೋಟಿ ಖರ್ಚು ಮಾಡಲಾಗಿದೆ. ಆದರೂ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರತಿ ಅಕ್ರಮದ ಸಂದರ್ಭದಲ್ಲೂ ಅಧಿಕಾರಿಗಳನ್ನು ಮಾತ್ರ ಹೊಣೆ ಮಾಡುವುದು ಸರಿಯಲ್ಲ. ಸಚಿವರು ಆಡಳಿತದ ಮೇಲ್ವಿಚಾರಣೆ ವಹಿಸಬೇಕು ಎಂದು ಅಶೋಕ್ ಹೇಳಿದ್ದಾರೆ.
“ಸಚಿವರ ಗಮನಕ್ಕೆ ಬಾರದಂತೆ ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ನಡೆಯಲು ಹೇಗೆ ಸಾಧ್ಯ? ಸರ್ಕಾರದ ನಿಯಂತ್ರಣದ ಕೊರತೆ ಇದರಿಂದ ಸ್ಪಷ್ಟವಾಗುತ್ತಿದೆ” ಎಂದು ಅವರು ಕಿಡಿಕಾರಿದ್ದಾರೆ.
ಜನರ ತೆರಿಗೆ ಹಣದ ದುರುಪಯೋಗದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸಿದ್ದಾರೆ.