RCB vs ಡೆಲ್ಲಿ ಕ್ಯಾಪಿಟಲ್ಸ್ – ದಿನಾಂಕ, ಸಮಯ, ಸ್ಥಳ, ನೇರ ಪ್ರಸಾರದ ಮಾಹಿತಿ ಇಲ್ಲಿದೆ!

2024ರ ಚಾಂಪಿಯನ್ ಆರ್ಸಿಬಿ ಟ್ರೋಫಿಯನ್ನು ಉಳಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿದರೆ, ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ WPL ಕಿರೀಟಕ್ಕಾಗಿ ಎದುರು ನೋಡುತ್ತಿದೆ.

ಲೀಗ್ ಹಂತದಲ್ಲಿ 6 ಪಂದ್ಯಗಳನ್ನು ಗೆದ್ದು ಅಗ್ರಸ್ಥಾನ ಪಡೆದುಕೊಂಡ ಆರ್ಸಿಬಿ ನೇರವಾಗಿ ಫೈನಲ್ ಪ್ರವೇಶಿಸಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿ ಸತತ ನಾಲ್ಕನೇ ಬಾರಿ ಫೈನಲ್‌ಗೆ ಅರ್ಹತೆ ಪಡೆದಿದೆ. ಆದರೆ ಡೆಲ್ಲಿ ತಂಡ ನಾಲ್ಕು ಬಾರಿ ಫೈನಲ್ ಆಡಿದ್ದರೂ ಇನ್ನೂ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ.

2024ರ ಆವೃತ್ತಿಯ ಫೈನಲ್‌ನಲ್ಲಿ ಇದೇ ಆರ್ಸಿಬಿ ತಂಡ ಡೆಲ್ಲಿಯನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಹೀಗಾಗಿ ಆರ್ಸಿಬಿ ಇತಿಹಾಸ ಮರುಕಳಿಸಲು ನೋಡುತ್ತಿದ್ದರೆ, ಡೆಲ್ಲಿ ತನ್ನ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

WPL 2026 ಫೈನಲ್ ಪಂದ್ಯ ವಿವರಗಳು

  • ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್

  • ದಿನಾಂಕ: ಫೆಬ್ರವರಿ 5, ಗುರುವಾರ

  • ಸ್ಥಳ: ಬಿಸಿಎ ಸ್ಟೇಡಿಯಂ, ವಡೋದರ

  • ಸಮಯ: ಸಂಜೆ 7:30 (IST)

  • ಟಾಸ್: ಸಂಜೆ 7:00

ನೇರ ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್

ಮಹಿಳಾ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕವೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ತಂಡಗಳ ವಿವರ

ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಸಯಾಲಿ ಸತ್ಘರೆ, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ಗ್ರೇಸ್ ಹ್ಯಾರಿಸ್, ಗೌತಮಿ ನಾಯಕ್, ಪ್ರತ್ಯೂಷಾ ಕುಮಾರ್, ಡಿ ಹೇಮಲತಾ.

ಡೆಲ್ಲಿ ಕ್ಯಾಪಿಟಲ್ಸ್:
ಲಿಜೆಲ್ ಲೀ, ಶಫಾಲಿ ವರ್ಮಾ, ಲಾರಾ ವೊಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್ (ನಾಯಕಿ), ಮರಿಜಾನ್ನೆ ಕಪ್, ಚಿನೆಲ್ಲೆ ಹೆನ್ರಿ, ನಿಕಿ ಪ್ರಸಾದ್, ಸ್ನೇಹ್ ರಾಣಾ, ಮಿನ್ನು ಮಣಿ, ಶ್ರೀ ಚರಣಿ, ನಂದನಿ ಶರ್ಮಾ, ಎಡ್ಲಾ ಸೃಜನಾ, ಪ್ರಗತಿ ಸಿಂಗ್, ಲೂಸಿ ಹ್ಯಾಮಿಲ್ಟನ್, ತಾನಿಯಾ ಭಾಟಿಯಾ, ಅಲಾನಾ ಕಿಂಗ್.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-02-04 18:49:29
No Reviews