Shopping cart
Your cart empty!
Terms of use dolor sit amet consectetur, adipisicing elit. Recusandae provident ullam aperiam quo ad non corrupti sit vel quam repellat ipsa quod sed, repellendus adipisci, ducimus ea modi odio assumenda.
Lorem ipsum dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Do you agree to our terms? Sign up
ಟಿ20ಐ ಕ್ರಿಕೆಟ್ನಲ್ಲಿ ಒಂದೇ ಓವರ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ಶಿವಂ ದುಬೆ ಇಬ್ಬರೂ 28 ರನ್ಗಳೊಂದಿಗೆ ಸಮಾನ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ 30 ರನ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 2007ರಲ್ಲಿ ಇಂಗ್ಲೆಂಡ್ ವಿರುದ್ಧ ಆರು ಸಿಕ್ಸರ್ಗಳನ್ನು ಸಿಡಿಸಿ 36 ರನ್ ಗಳಿಸಿದ್ದ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ.
ನಾಲ್ಕನೇ ಟಿ20 ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶಿವಂ ದುಬೆ 23 ಎಸೆತಗಳಲ್ಲಿ 65 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ತಂಡವನ್ನು ಗೆಲುವಿನ ಹತ್ತಿರಕ್ಕೆ ಕರೆದೊಯ್ಯುತ್ತಿದ್ದ ವೇಳೆ ಅವರು ದುರ್ಬಾಗ್ಯವಶಾತ್ ರನೌಟ್ ಆಗಿ ವಿಕೆಟ್ ಕಳೆದುಕೊಂಡರು.
ಪಂದ್ಯದ ನಂತರ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, “ನಾವು ಉದ್ದೇಶಪೂರ್ವಕವಾಗಿ ಆರು ಬ್ಯಾಟ್ಸ್ಮನ್ಗಳೊಂದಿಗೆ ಆಡಿದೆವು. ಐದು ಬೌಲರ್ಗಳನ್ನು ಹೊಂದಿ ನಮ್ಮನ್ನು ನಾವೇ ಸವಾಲು ಮಾಡಿಕೊಳ್ಳಲು ಬಯಸಿದ್ದೆವು. ವಿಶ್ವಕಪ್ ತಂಡದ ಭಾಗವಾಗಿರುವ ಆಟಗಾರರಿಗೆ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿತ್ತು. ಇಲ್ಲದಿದ್ದರೆ ಇತರ ಆಟಗಾರರನ್ನು ಆಡಿಸುತ್ತಿದ್ದೆವು. ನಮ್ಮ ಬ್ಯಾಟಿಂಗ್ ಉತ್ತಮ ದಾರಿಯಲ್ಲಿ ಸಾಗುತ್ತಿದೆ” ಎಂದು ತಿಳಿಸಿದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡ 215 ರನ್ಗಳ ಭರ್ಜರಿ ಮೊತ್ತ ದಾಖಲಿಸಿತು. ಗುರಿ ಬೆನ್ನತ್ತಿದ ಭಾರತ 18.4 ಓವರ್ಗಳಲ್ಲಿ 165 ರನ್ಗಳಿಗೆ ಆಲೌಟ್ ಆಗಿ 50 ರನ್ಗಳ ಸೋಲನ್ನು ಅನುಭವಿಸಿತು.
ಕಳೆದ ಎರಡು ಪಂದ್ಯಗಳಲ್ಲಿ ಅಬ್ಬರಿಸಿದ್ದ ನಾಯಕ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಕೇವಲ 8 ರನ್ಗಳಿಗೆ ನಿರಾಶೆ ತಂದರು. ಹಾರ್ದಿಕ್ ಪಾಂಡ್ಯ (2) ಕೂಡ ಹೆಚ್ಚು ಹೊತ್ತು ಕ್ರೀಸ್ನಲ್ಲಿ ಉಳಿಯಲಿಲ್ಲ. ಸ್ಯಾಮ್ಸನ್ ಸತತ ಮೂರನೇ ಪಂದ್ಯದಲ್ಲೂ ನಿರೀಕ್ಷಿತ ಪ್ರದರ್ಶನ ನೀಡದೇ 24 ರನ್ಗಳಿಗೆ ಸೀಮಿತವಾದರೆ, ರಿಂಕು ಸಿಂಗ್ 39 ರನ್ಗಳ ಉಪಯುಕ್ತ ಕೊಡುಗೆ ನೀಡಿದರು.
ನ್ಯೂಜಿಲ್ಯಾಂಡ್ ಪರ ನಾಯಕ ಮಿಚೆಲ್ ಸ್ಯಾಂಟ್ನರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದು, 4 ಓವರ್ಗಳಲ್ಲಿ 26 ರನ್ಗಳಿಗೆ 3 ವಿಕೆಟ್ ಕಿತ್ತರು. ಸೋಧಿ ಮತ್ತು ಡಫಿ ತಲಾ 2 ವಿಕೆಟ್ ಪಡೆದರು. ಬ್ಯಾಟಿಂಗ್ನಲ್ಲಿ ಸೀಫರ್ಟ್ 36 ಎಸೆತಗಳಲ್ಲಿ 62, ಕಾನ್ವೇ 23 ಎಸೆತಗಳಲ್ಲಿ 44 ಹಾಗೂ ಡ್ಯಾರಿಲ್ ಮಿಚೆಲ್ 18 ಎಸೆತಗಳಲ್ಲಿ 39 ರನ್ಗಳ ಸಿಡಿಲು ಇನ್ನಿಂಗ್ಸ್ ಆಡಿದರು.