ಏಕದಿನ ರ್ಯಾಂಕಿಂಗ್‌: ಮಂಧಾನ ನಂ.1, ಜೆಮಿಮಾ 12ಕ್ಕೆ ಕುಸಿತ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಭಾರತದ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಶ್ರೇಯಾಂಕದಲ್ಲಿ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನೊಂದೆಡೆ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅದ್ಭುತ ಆಲ್‌ರೌಂಡರ್ ಪ್ರದರ್ಶನ ತೋರಿದ ನ್ಯೂಜಿಲೆಂಡ್ ನಾಯಕಿ ಅಮೆಲೀ ಕೆರ್ ಬೌಲರ್‌ಗಳ ಪಟ್ಟಿಯಲ್ಲಿ ಐದು ಸ್ಥಾನ ಜಿಗಿದು 11ನೇ ಸ್ಥಾನಕ್ಕೆ ತಲುಪಿದ್ದು, ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ.

ಡ್ಯುನೆಡಿನ್‌ನಲ್ಲಿ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಕಬಳಿಸಿದ ಕೆರ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಏಳು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಳನೇ ಆಟಗಾರ್ತಿಯಾಗಿ ದಾಖಲೆ ನಿರ್ಮಿಸಿದ್ದಾರೆ. ಇತ್ತ ಟಿ20ಐ ಶ್ರೇಯಾಂಕದಲ್ಲೂ ಬದಲಾವಣೆಗಳಾಗಿದ್ದು, ಶ್ರೀಲಂಕಾದ ಹಸಿನಿ ಪೆರೆರಾ ಬ್ಯಾಟಿಂಗ್ ಪಟ್ಟಿಯಲ್ಲಿ 15 ಸ್ಥಾನ ಏರಿ 28ನೇ ಸ್ಥಾನಕ್ಕೇರಿದ್ದಾರೆ.

ಶ್ರೀಲಂಕಾದ ಕವಿಶಾ ದಿಲ್ಹಾರಿ ಬೌಲರ್‌ಗಳ ಪಟ್ಟಿಯಲ್ಲಿ 21ನೇ ಸ್ಥಾನಕ್ಕೆ ಹಾಗೂ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ 11ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ವೆಸ್ಟ್ ಇಂಡೀಸ್ ಸ್ಪಿನ್ನರ್ ಅಫಿ ಫ್ಲೆಚರ್ ಟಿ20ಐ ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕು ಸ್ಥಾನ ಏರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-03-11 13:46:48
No Reviews