ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದೊಡ್ಡ ಬದಲಾವಣೆ

ರಾಜ್ಯದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಸಾಧನೆ ಕಂಡಿದೆ. ಫೇಲ್ ಆದ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಗೆ ಅವಕಾಶ ನೀಡಲಾಗಿದ್ದು, ಮೇ 18ರಿಂದ ಪರೀಕ್ಷೆ ಆರಂಭವಾಗಲಿದೆ.

ಈ ಬಾರಿ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜೊತೆಗೆ ಫೇಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ ಪಾಸ್ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ. 625ಕ್ಕೆ 625 ಅಂಕ ಪಡೆದ 7 ವಿದ್ಯಾರ್ಥಿಗಳು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ ಮತ್ತು ಮಂಡ್ಯ ಜಿಲ್ಲೆಗಳು ಟಾಪ್ ಸ್ಥಾನ ಪಡೆದಿದ್ದು, ಫಲಿತಾಂಶದಲ್ಲಿ ಭರ್ಜರಿ ಸಾಧನೆ ದಾಖಲಾಗಿದೆ. ಡಿಜಿಲಾಕರ್ ಮೂಲಕ ಅಂಕಪಟ್ಟಿ ಲಭ್ಯವಾಗಿದ್ದು, ಫಲಿತಾಂಶವನ್ನು ವೆಬ್‌ಸೈಟ್, ಆಪ್ ಮತ್ತು ಎಸ್‌ಎಂಎಸ್ ಮೂಲಕ ಪಡೆಯಬಹುದು.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-04-23 17:01:34
No Reviews