ಕನ್ನಡದಲ್ಲೂ ಸದ್ದು ಮಾಡಲಿದೆಯೇ ಪಾಕೆಟ್ ನಾವೆಲ್

ತಮಿಳು ನಿರ್ದೇಶಕ ತ್ಯಾಗರಾಜನ್ ಕುಮಾರರಾಜ ನಿರ್ದೇಶನದ ಬಹುನಿರೀಕ್ಷಿತ ‘ಪಾಕೆಟ್ ನಾವೆಲ್’ ಸಿನಿಮಾ ಜನವರಿ 14ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ, ಕನ್ನಡದ ರಾಜ್ ಬಿ. ಶೆಟ್ಟಿ ಹಾಗೂ ಮಾಳವಿಕಾ ಮೋಹನನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ರಾಜ್ ಬಿ. ಶೆಟ್ಟಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಜಿ.ವಿ. ಪ್ರಕಾಶ್ ಕುಮಾರ್ ವಹಿಸಿಕೊಂಡಿದ್ದು, ನಿರ್ದೇಶಕರ ಜೊತೆಗಿನ ಅವರ ಮೊದಲ ಸಿನಿಮಾ ಇದಾಗಿದೆ. ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬದ ಪ್ರಯುಕ್ತ ತೆರೆಗೆ ಬರುತ್ತಿರುವ ‘ಪಾಕೆಟ್ ನಾವೆಲ್’ ಬಾಕ್ಸ್ ಆಫೀಸ್‌ನಲ್ಲಿ ಹಲವು ದೊಡ್ಡ ಸಿನಿಮಾಗಳೊಂದಿಗೆ ಪೈಪೋಟಿ ನಡೆಸಲಿದೆ. ಹೀಗಾಗಿ ಈ ಚಿತ್ರದ ಬಿಡುಗಡೆಗಾಗಿ ಸಿನಿಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-11-13 17:58:10
No Reviews