Shopping cart
Your cart empty!
Terms of use dolor sit amet consectetur, adipisicing elit. Recusandae provident ullam aperiam quo ad non corrupti sit vel quam repellat ipsa quod sed, repellendus adipisci, ducimus ea modi odio assumenda.
Lorem ipsum dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Dolor sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Sit amet consectetur adipisicing elit. Sequi, cum esse possimus officiis amet ea voluptatibus libero! Dolorum assumenda esse, deserunt ipsum ad iusto! Praesentium error nobis tenetur at, quis nostrum facere excepturi architecto totam.
Lorem ipsum dolor sit amet consectetur adipisicing elit. Inventore, soluta alias eaque modi ipsum sint iusto fugiat vero velit rerum.
Do you agree to our terms? Sign up
ಕೊಪ್ಪಳ, ಜನವರಿ 27:
ತುಂಗಭದ್ರಾ ಜಲಾಶಯವು (Tungabhadra Dam) ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ಜನರ ಜೀವನಾಡಿ. ಅನ್ನದಾತರ ಬದುಕಿಗೆ ನೀರಿನ ಆಧಾರವಾಗಿರುವ ಈ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಕೆ ವಿಚಾರ ಇದೀಗ ರಾಜಕೀಯ ಕದನಕ್ಕೆ ಕಾರಣವಾಗಿದೆ.
ಕಳೆದ ಮಳೆಗಾಲದಲ್ಲಿ ತುಂಗಭದ್ರಾ ಡ್ಯಾಂನ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಜೊತೆಗೆ ಇನ್ನೂ ಆರು ಗೇಟ್‌ಗಳಿಗೆ ಹಾನಿಯಾಗಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 54 ಕೋಟಿ ರೂ. ವೆಚ್ಚದಲ್ಲಿ 33 ಕ್ರೆಸ್ಟ್ ಗೇಟ್‌ಗಳ ಬದಲಾವಣೆಗೆ ಆದೇಶ ನೀಡಿತ್ತು. ಗುಜರಾತ್ ಮೂಲದ ಕಂಪನಿಗೆ ಕಾಮಗಾರಿ ಟೆಂಡರ್ ನೀಡಲಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಆರಂಭಗೊಂಡಿದೆ.
ಈವರೆಗೆ 18ನೇ ಗೇಟ್‌ಗೆ ಮಾತ್ರ ಕ್ರೆಸ್ಟ್ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ಇನ್ನೂ 32 ಗೇಟ್‌ಗಳ ಅಳವಡಿಕೆ ಬಾಕಿಯಿದೆ. ಈ ನಡುವೆ ಗೇಟ್ ಕಾಮಗಾರಿಗೆ ನೀಡಲಾಗಿದ್ದ 10 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮಾಡಿದೆ. ಈ ಆರೋಪವನ್ನು ಆಧರಿಸಿ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಕಾಮಗಾರಿಗೆ ರಾಜ್ಯ ಸರ್ಕಾರ 10 ಕೋಟಿ ರೂ. ನೀಡಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳು ಸೇರಿ 25 ಕೋಟಿ ರೂ. ಅನುದಾನ ನೀಡಿವೆ ಎನ್ನಲಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ತನ್ನ ಪಾಲಿನ ಹಣವನ್ನು ವಾಪಸ್ ಪಡೆದಿದೆ ಎಂಬ ಆರೋಪ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅಧಿಕಾರಿಗಳು, ಎಲ್ಲ ವಿಚಾರಗಳು ತುಂಗಭದ್ರಾ ಬೋರ್ಡ್‌ಗೆ ತಿಳಿದಿವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದು,
“ರಾಜ್ಯ ಸರ್ಕಾರ ಯಾವುದೇ ಹಣವನ್ನೂ ವಾಪಸ್ ಪಡೆದಿಲ್ಲ. ಖಜಾನೆಯಲ್ಲಿ ತಾತ್ಕಾಲಿಕ ಸಮಸ್ಯೆ ಇದ್ದರೂ ಕಾಮಗಾರಿಗೆ ಹಣ ನೀಡುವುದು ನಮ್ಮ ಜವಾಬ್ದಾರಿ. ಫೆಬ್ರವರಿ ಅಂತ್ಯದೊಳಗೆ 6 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗುವುದು” ಎಂದು ತಿಳಿಸಿದ್ದಾರೆ.
ಈಗಾಗಲೇ ಎರಡನೇ ಬೆಳೆಗೆ ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ವಿಳಂಬವಾದರೆ ಕಾಮಗಾರಿ ಮತ್ತಷ್ಟು ತಡವಾಗಲಿದೆ ಎಂದು ಗುತ್ತಿಗೆದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮ ರೈತರ ಮೇಲೆ ಬೀಳುವ ಸಾಧ್ಯತೆ ಇದ್ದು, ವಿಷಯ ಮತ್ತಷ್ಟು ಗಂಭೀರವಾಗುತ್ತಿದೆ.
ರಾಜ್ಯ ಸರ್ಕಾರ ಹಣ ವಾಪಸ್ ಪಡೆದಿದೆ ಎಂಬ ಆರೋಪದ ನಡುವೆ ರಾಜಕೀಯ ತಿಕ್ಕಾಟ ತೀವ್ರಗೊಂಡಿದ್ದು, ಈ ವಿಚಾರ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.