ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ

ಹರ್ಮನ್ಪ್ರೀತ್ ನಾಯಕಿ, ಸ್ಮೃತಿ ಮಂಧಾನ ಉಪನಾಯಕಿ

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಬಹುನಿರೀಕ್ಷಿತ ಸರಣಿ ಫೆಬ್ರವರಿ 15ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಮೊದಲು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ನಂತರ ಮೂರು ಏಕದಿನ ಪಂದ್ಯಗಳು ಜರುಗಲಿವೆ. ಇದರೊಂದಿಗೆ ಮಾರ್ಚ್ 6ರಿಂದ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಈ ಟೆಸ್ಟ್ ಪಂದ್ಯಕ್ಕಾಗಿ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, 15 ಸದಸ್ಯರ ಈ ತಂಡವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಉಪನಾಯಕಿಯಾಗಿ ಸ್ಮೃತಿ ಮಂಧಾನ ಅವರನ್ನು ನೇಮಿಸಲಾಗಿದೆ.

ಪ್ರತೀಕಾ ರಾವಲ್‌ಗೆ ಮರಳಿ ಅವಕಾಶ

ಏಕದಿನ ವಿಶ್ವಕಪ್‌ನ ಅಂತಿಮ ಹಂತದ ವೇಳೆ ಗಾಯಗೊಂಡಿದ್ದ ಪ್ರತೀಕಾ ರಾವಲ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಈ ಬಾರಿ ಟೆಸ್ಟ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಕೂಡ ತಂಡದಲ್ಲಿದ್ದು, ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಹೊಸ ಪ್ರಯೋಗ ನಡೆಸುವ ಸಾಧ್ಯತೆಯೂ ಇದೆ.

ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಸಮತೋಲನ

ಜೆಮಿಮಾ ರೊಡ್ರಿಗಸ್, ಅಮನ್ಜೋತ್ ಕೌರ್ ಹಾಗೂ ಹರ್ಲೀನ್ ಡಿಯೋಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್‌ಗಳಾಗಿ ರಿಚಾ ಘೋಷ್ ಮತ್ತು ಉಮಾ ಚೆಟ್ರಿ ಆಯ್ಕೆಯಾಗಿದ್ದಾರೆ.

ವೇಗದ ಬೌಲಿಂಗ್ ವಿಭಾಗದಲ್ಲಿ ರೇಣುಕಾ ಸಿಂಗ್ ಠಾಕೂರ್ ಮತ್ತು ಕ್ರಾಂತಿ ಗೌಡ್ ತಂಡದಲ್ಲಿದ್ದು, ದೀಪ್ತಿ ಶರ್ಮಾ ಹಾಗೂ ಸ್ನೇಹ್ ರಾಣಾ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ.


ಭಾರತ ಮಹಿಳಾ ಟೆಸ್ಟ್ ತಂಡ

ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಅಮನ್ಜೋತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರೇಣುಕಾ ಸಿಂಗ್ ಠಾಕೂರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ವೈಷ್ಣವಿ ಶರ್ಮಾ, ಸಯಾಲಿ ಸತ್ಘರೆ.

ಭಾರತ ಮಹಿಳಾ ಏಕದಿನ ತಂಡ

ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ್ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಕಾಶ್ವೀ ಗೌತಮ್, ಅಮನ್ಜೋತ್ ಕೌರ್, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್.

ಭಾರತ ಮಹಿಳಾ ಟಿ20 ತಂಡ

ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಸ್ನೇಹ್ ರಾಣಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಅಮನ್ಜೋತ್ ಕೌರ್, ಜೆಮಿಮಾ ರೊಡ್ರಿಗಸ್, ಭಾರ್ತಿ ಫುಲ್ಮಾಲಿ, ಶ್ರೇಯಾಂಕಾ ಪಾಟೀಲ್.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-24 15:09:24
No Reviews