ಸರ್ಕಾರಿ ನೌಕರರಿಗೆ ಹೊಸ ಶಾಕ್: ಖಾದಿ ಉಡುಪು ಕಡ್ಡಾಯ!

ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿಯವರು ಇಂದು ಸರ್ಕಾರಿ ನೌಕರರ ಸಂಘಟನೆಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೊರಬಿದ್ದಿರುವ ಸುತ್ತೋಲೆಯಲ್ಲಿ ಸ್ಪಷ್ಟ ವಿವರಗಳನ್ನು ನೀಡಲಾಗಿದೆ.

ಸುತ್ತೋಲೆಯ ಪ್ರಕಾರ, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರ ಖಾದಿ ಉಡುಪು ಧರಿಸುವುದು, ಹಾಗೆಯೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಖಾದಿ ಉಡುಪು ಧರಿಸುವ ಕುರಿತು ಚರ್ಚಿಸಲು, ಇಂದು (ದಿನಾಂಕ: 29-01-2026) ಮಧ್ಯಾಹ್ನ 12.00 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 320ರಲ್ಲಿ, ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಭೆ ನಿಗದಿಪಡಿಸಲಾಗಿದೆ.

ಈ ಸಭೆಗೆ ಹಾಜರಾಗುವಂತೆ ತಮಗೆ ನಿರ್ದೇಶನ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಪ್ರಕಟಿಸಿದವರು ಬಿಗ್ ನ್ಯೂಸ್ 24/7 ಕನ್ನಡ ದಿನಾಂಕ 2026-01-29 12:00:48
No Reviews